ಕಡ್ಲೆಕಾಳು ಉಸುಲಿ
ಬೇಕಾಗುವ ಸಾಮಗ್ರಿಗಳು:
ಕಡ್ಲೆಕಾಳು 1ಕಪ್ (ನೆನೆಸಿದ್ದು)
ಹಸಿಮೆಣಸಿನಕಾಯಿ 3
ಕರಿಬೇವು ಸ್ವಲ್ಪ
ಕೊತ್ತಂಬರಿ ಸೊಪ್ಪು ಸ್ವಲ್ಪ
ಎಣ್ಣೆ 2ಚಮಚ
ಸಾಸಿವೆ 1/4 ಚಮಚ
ಇಂಗು ಸ್ವಲ್ಪ
ತೆಂಗಿನ ತುರಿ 2ಚಮಚ
ಈರುಳ್ಳಿ 1(ಬೇಕಿದ್ದರೆ)
ಉಪ್ಪು ರುಚಿಗೆ ತಕ್ಕಷ್ಟು
ಮಾಡುವ ವಿಧಾನ:
ಕಡ್ಲೆಕಾಳನ್ನು ಸ್ವಲ್ಪ ಉಪ್ಪು ಹಾಕಿ ಕುಕ್ಕರ್ ನಲ್ಲಿ ಬೇಯಿಸಿ, ನೀರು ಬಸಿದು ತೆಗೆದಿಡಿ. ಈರುಳ್ಳಿ ಮತ್ತು ಹಸಿಮೆಣಸಿನಕಾಯಿಯನ್ನು ಸಣ್ಣಗೆ ಹೆಚ್ಚಿಕೊಳ್ಳಿ.
ಒಂದು ಬಾಣಲೆಗೆ ಎಣ್ಣೆ ಹಾಕಿ ಬಿಸಿಯಾದ ಮೇಲೆ ಸಾಸಿವೆ ಹಾಕಿ ಸಿಡಿಸಿ ನಂತರ ಈರುಳ್ಳಿ, ಹಸಿಮೆಣಸಿನಕಾಯಿ, ಕರಿಬೇವು, ಇಂಗು ಹಾಕಿ ಫ್ರೈ ಮಾಡಿ. ನಂತರ ಬೇಯಿಸಿದ ಕಡ್ಲೆಕಾಳು ಹಾಕಿ ಮಿಕ್ಸ್ ಮಾಡಿ. ರುಚಿ ನೋಡಿ ಬೇಕಿದ್ದರೆ ಸ್ವಲ್ಪ ಉಪ್ಪು ಸೇರಿಸಿ. ಕೊನೆಯದಾಗಿ ಕೊತ್ತಂಬರಿ ಸೊಪ್ಪು ಮತ್ತು ತೆಂಗಿನ ತುರಿ ಸೇರಿಸಿ ಮಿಕ್ಸ್ ಮಾಡಿ.